ಇಂದು ಸಂಜೆ ಜಲಪಾತೋತ್ಸವ ಉದ್ಘಾಟನಾ ಸಮಾರಂಭ*

Spread the love

*ನವೆಂಬರ್ 30 ರಂದು ಜಲಪಾತೋತ್ಸವ ಉದ್ಘಾಟನಾ ಸಮಾರಂಭ*
ಮೈಸೂರು,- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ, ಮೈಸೂರು ಇವರ ಸಂಯುಕ್ತಾಶ್ರದಲ್ಲಿ ನವೆಂಬರ್ 30 ಮತ್ತು ಡಿಸೆಂಬರ್ 01 ರಂದು ಚುಂಚನಕಟ್ಟೆ ಜಲಪಾತೋತ್ಸವವನ್ನು ಆಯೋಜಿಸಲಾಗಿದ್ದು, ಜಲಪಾತೋತ್ಸವದ ಉದ್ಘಾಟನಾ ಸಮಾರಂಭವನ್ನು ನವೆಂಬರ್ 30 ರಂದು ಸಂಜೆ 6.30 ಗಂಟೆಗೆ ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆಯ ಶ್ರೀರಾಮ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಮುಖ್ಯ ಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ, ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದು, ಕೃಷ್ಣ ರಾಜನಗರ ವಿಧಾನಸಭಾ ಶಾಸಕರಾದ ರವಿಶಂಕರ್ ಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶಿವರಾಜ ಎಸ್.ತಂಗಡಗಿ, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್.ಸಿ, ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷರಾದ ಎ.ಬಿ ರಮೇಶ್ ಬಂಡಿ ಸಿದ್ದೇಗೌಡ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್ ಹಾಗೂ ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಮಾನಸ ಅವರು ಗೌರವ ಉಪಸ್ಥಿತರಿರಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಶಾಸಕರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಶಾಸಕರಾದ ಸುನಿಲ್ ಬೋಸ್ ಅವರು ಆಗಮಿಸಲಿದ್ದಾರೆ.

ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವಿರ್ ಸೇಠ್, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ ದೇವೇಗೌಡ, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಎಸ್.ಶ್ರೀವತ್ಸ, ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ದೃವನಾರಾಯಣ್, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಡಿ ಹರೀಶ್ ಗೌಡ ಹಾಗೂ ವಿಧಾನ ಪರಿಷತ್ ಸದಸ್ಯರುಗಳಾದ ಹೆಚ್.ವಿಶ್ವನಾಥ್, ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮಧು ಜಿ.ಮಾದೇಗೌಡ, ಯತಿಂದ್ರ.ಎಸ್ ಮತ್ತು ವಿವೇಕಾನಂದ.ಎಸ್ ಅವರು ಸಮಾರಂಭದ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್, ಕಾವೇರಿ ಜಲಾನಯನ ಯೋಜನೆಯ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷರಾದ ಮರಿಸ್ವಾಮಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವರು.