ಜೆ ಎಸ್ ಎಸ್ ಪ್ರಾಯೋಗಿಕ ಪ್ರಾಥಮಿಕ ಶಾಲೆಯ ಮಕ್ಕಳಿಂದ ಮಕ್ಕಳ ಸಂತೆ

Spread the love

 

ಜೆ ಎಸ್ ಎಸ್ ಪ್ರಾಯೋಗಿಕ ಪ್ರಾಥಮಿಕ ಶಾಲೆಯ ಮಕ್ಕಳಿಂದ ಮಕ್ಕಳ ಸಂತೆ

ಜೆ ಎಸ್ ಎಸ್ ಪ್ರಾಯೋಗಿಕ ಪ್ರಾಥಮಿಕ ಶಾಲೆ ಸರಸ್ವತಿಪುರಂ ನಲ್ಲಿ 2024ರ ಮಕ್ಕಳ ಸಂತೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ಗುರುಸ್ವಾಮಿ ಎಮ್ ಭಾಗವಹಿಸಿದ್ದರು. ಜೊತೆಗೆ ಕ್ಯಾಂಪಸ್ ನ ಎಲ್ಲ ಮುಖ್ಯಸ್ಥರುಗಳು, ಎಲ್ಲ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಈ ಸಂತೆಯ ಉದ್ದೇಶ ಮಕ್ಕಳಲ್ಲಿ ವ್ಯವಹಾರ ಕೌಶಲ್ಯ ವ್ಯವಹಾರ ಜ್ಞಾನವನ್ನು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಏರ್ಪಡಿಸಲಾಗಿತ್ತು. ಮಕ್ಕಳು ಬಗೆ ಬಗೆಯ ತಿಂಡಿ ತಿನಿಸುಗಳನ್ನು ಮಾಡಿಕೊಂಡು ಬಂದಿದ್ದರು.ಕಾರ್ಯಕ್ರಮದಲ್ಲಿ ಪೋಷಕರು ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡು ಮಕ್ಕಳಲ್ಲಿ ವ್ಯಾಪಾರವನ್ನು ಮಾಡಿ ಮಕ್ಕಳನ್ನು ಉರಿದುಂಬಿಸಿದರು. ಒಟ್ಟಾರೆ ಶಾಲೆಯಲ್ಲಿ ಜಾತ್ರೆಯ ವಾತಾವರಣ ಕಳೆಗಟ್ಟಿತ್ತು.

ಇದೇ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ವೃಂದ ಹಾಗೂ ಪೋಷಕರು ಹಾಜರಿದ್ದರು