*ಡಿ.04 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದ ಉದ್ಘಾಟನೆ

Spread the love

 

*ಡಿ.04 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ*

ಮೈಸೂರು,ಡಿ.3 ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೈಸೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈಸೂರು, ನೆಹರು ಯುವ ಕೆಂದ್ರ, ಮೈಸೂರು ರಾಷ್ಟ್ರೀಯ ಸೇವಾ ಯೋಜನೆ, ಮೈಸೂರು ವಿಶ್ವವಿದ್ಯಾನಿಲಯ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಮೈಸೂರು ಇವರುಗಳ ಸಹಯೋಗದಲ್ಲಿ ಡಿಸೆಂಬರ್ 4 ರಂದು ಬೆಳಗ್ಗೆ 10 ಗಂಟೆಗೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ “ಮೈಸೂರು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ” ದ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಲಾಗಿದೆ.

ಮುಖ್ಯ ಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ, ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದು, ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವಿರ್ ಸೇಠ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

 

ಮುಖ್ಯ ಅತಿಥಿಗಳಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಶಾಸಕರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಶಾಸಕರಾದ ಸುನಿಲ್ ಬೋಸ್ ಅವರು ಆಗಮಿಸಲಿದ್ದಾರೆ.

 

ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್, ಕಾವೇರಿ ಜಲಾನಯನ ಯೋಜನೆಯ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷರಾದ ಮರಿಸ್ವಾಮಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವರು.