ಮಧುಮೇಹದ‌ ಬಗ್ಗೆ ಜಾಗೃತಿ ಗಾಗಿ ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಪಾದಯಾತ್ರೆ

Spread the love

ಮಧುಮೇಹದ‌ ಬಗ್ಗೆ ಜಾಗೃತಿ ಗಾಗಿ ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಪಾದಯಾತ್ರೆ
ಪ್ರಾರಂಭಿಸಿದ ದತ್ತ ವಿಜಯಾನಂದ ಶ್ರೀಗಳು

ಮೈಸೂರು: ಇತ್ತೀಚಿನ ದಿನಗಳಲ್ಲಿ ಮಧುಮೇಹದ ಬಗ್ಗೆ ಅತಿ ಹೆಚ್ಚು ನಾವು ಕೇಳುತ್ತಿದ್ದೇವೆ, ಅದಕ್ಕಾಗಿ ಜನರಲ್ಲಿ ಜಾಗೃತಿ ಮೂಡಿಸಲು ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಿಂದ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಪಾದಯಾತ್ರೆ ಹೊರಟಿರುವುದಾಗಿ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ತಿಳಿಸಿದರು.

ನಮ್ಮ ನಡಿಗೆ ಆರೋಗ್ಯವಂತ ವಿಶ್ವದೆಡೆಗೆ ಎಂಬ ಘೋಷವಾಖ್ಯದಡಿ
ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಿಂದ
ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಶ್ರೀಗಳು ಇಂದು ಬೆಳಿಗ್ಗೆ ಪಾದಯಾತ್ರೆ ಕೈಗೊಂಡಿದ್ದು,ಈ ವೇಳೆ ಭಕ್ತರನ್ನುದ್ದೇಶಿಸಿ ಮಾತನಾಡಿದರು.

ಮಧುಮೇಹದ ಬಗ್ಗೆ ಜನರಲ್ಲಿ ಜಾಗೃತಿ ಅತ್ಯವಶ್ಯಕವಾಗಿದೆ ಹಾಗಾಗಿ ಪ್ರತಿದಿನ ಎಲ್ಲರೂ ಯಾವುದಾದರೂ ಒಂದು ವ್ಯಾಯಾಮವನ್ನು ಮಾಡಬೇಕು, ಉತ್ತಮ ಸಮಾಜಕ್ಕಾಗಿ ನಾವೆಲ್ಲ ಕೃಷಿ ಮಾಡಬೇಕು.ಜನರಲ್ಲಿ ತಿಳುವಳಿಕೆ ಮೂಡಿಸಲು ಈ ಪಾದಯಾತ್ರೆ ಕೈಗೊಂಡಿದ್ದೇವೆ, ನಮ್ಮ ಜೊತೆ ಭಕ್ತರು ಸೇರಿ ನಡಿಗೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಹೇಳಿದರು.

ಧರ್ಮ ಮಾರ್ಗದಲ್ಲಿ ನಡೆಯಲು ಬೇಕಾದ ಆರೋಗ್ಯ ದಯಪಾಲಿಸು, ನಮಗೆ ಬೇಕಾದ ಉತ್ತಮ ಬುದ್ಧಿ, ಒಳ್ಳೆಯ ಆರೋಗ್ಯ ಅನುಗ್ರಹಿಸು ಎಂದು ಸ್ವಾಮಿ ಶ್ರೀಕಂಠೇಶ್ವರ ನಲ್ಲಿ ಪ್ರಾರ್ಥಿಸಿ ಈ ಪಾದಯಾತ್ರೆ ಕೈಗೊಂಡಿದ್ದೇವೆ ಎಂದು ಹೇಳಿದರು.

ಪ್ರತಿ ದಿನ ಜನರು ತಾವಿರುವ ಜಾಗದಲ್ಲೇ ಯಾವುದಾದರೂ ಆಶ್ರಮ ಅಥವಾ ದೇವಸ್ಥಾನಗಳಿಗೆ ತೆರಳಿ ದೇವರ ದರ್ಶನ ಮಾಡಿ ಪ್ರದಕ್ಷಿಣೆ ಹಾಕಬೇಕು ಇದರಿಂದ ಭಕ್ತಿ ಹೆಚ್ಚಾಗುತ್ತದೆ ಮತ್ತು ಉತ್ತಮ ಆರೋಗ್ಯವನ್ನು ಪಡೆಯಬಹುದು. ದೇವರ ದರ್ಶನ ಮಾಡುವುದು ಪ್ರದಕ್ಷಿಣೆ ಹಾಕುವುದು ನಮ್ಮ ಸನಾತನ ಧರ್ಮದ ಸಂಪ್ರದಾಯವೂ ಆಗಿದೆ ಹಾಗಾಗಿ ಮಕ್ಕಳಿಗೂ ಕೂಡ ಪ್ರದಕ್ಷಿಣೆ ಮಾಡುವುದನ್ನು ಕಲಿಸಬೇಕು ಎಂದು ಶ್ರೀ ದತ್ತ ವಿಜಯಾನಂದ ತೀರ್ಥ ಶ್ರೀಗಳು ಸಲಹೆ ನೀಡಿದರು.

ಪ್ರತಿಯೊಬ್ಬ ಮನುಷ್ಯನ ಉತ್ತಮ ಆರೋಗ್ಯಕ್ಕೆ ಕಾಲ್ನಡಿಗೆ ಅತ್ಯುತ್ತಮ ವ್ಯಾಯಾಮ ಎಂಬ ಕುರಿತು ವಿಶ್ವ ಜನ ಜಾಗೃತಿ ಮೂಡಿಸುವ ಸಲಯವಾಗಿ ಈ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ದತ್ತಪೀಠಾಧಿಪತಿ ಪೂಜ್ಯ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಶ್ರೀ ದತ್ತವಿಜಯಾನಂದ ತೀರ್ಥ ಸ್ವಾಮೀಜಿಯವರು ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಈ ಪಾದಯಾತ್ರೆ ಪ್ರಾರಂಭಿಸಿದರು‌. ಶ್ರೀಗಳೊಂದಿಗೆ ನೂರಾರು ಭಕ್ತರು ಕೂಡ ಪಾದಯಾತ್ರೆಯಲ್ಲಿ ಸಾಗಿ ಬಂದರು.

ಶ್ರೀ ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಯನ್ನು ತಲುಪಿದ ಕೂಡಲೇ ಸ್ವಾಮಿಗೆ ಅಭಿಷೇಕ, ವಿಶೇಷ ಪೂಜೆಯನ್ನು ಶ್ರೀಗಳು ನೆರವೇರಿಸಿ ನಂತರ ಮಹಾಮಂಗಳಾರತಿ ಸ್ವೀಕರಿಸಿದರು.