ಮೈಸೂರು ಜಿಲ್ಲಾ ಮಟ್ಟದ ಯುವಜನೋತ್ಸವ :ವಿವಿಧ ಸ್ಪರ್ಧೆಗಳ ಆಯೋಜನೆ

Spread the love

*ಮೈಸೂರು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ:ವಿವಿಧ ಸ್ಪರ್ಧೆಗಳ ಆಯೋಜನೆ*

ಮೈಸೂರು,ನ.28- ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೈಸೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈಸೂರು, ನೆಹರು ಯುವ ಕೆಂದ್ರ, ಮೈಸೂರು ರಾಷ್ಟ್ರೀಯ ಸೇವಾ ಯೋಜನೆ, ಮೈಸೂರು ವಿಶ್ವವಿದ್ಯಾನಿಲಯ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಮೈಸೂರು ಇವರುಗಳ ಸಹಯೋಗದಲ್ಲಿ ಡಿಸೆಂಬರ್ 14 ರಂದು ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ “ಮೈಸೂರು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ”ದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ವಿಷಯಾಧಾರಿತ ಸ್ಪರ್ಧೆಗಳು ವಿಜ್ಞಾನ ಮೇಳ, ಕನ್ನಡ/ಆಂಗ್ಲ/ಹಿoದಿ ಭಾಷೆಯಲ್ಲಿ ಜಾನಪದ ನೃತ್ಯ (ತಂಡ), ಜಾನಪದ ಗೀತೆ (ತಂಡ), ಜಾನಪದ ನೃತ್ಯ (ವೈಯಕ್ತಿಕ), ಜಾನಪದ ಗೀತೆ (ವೈಯಕ್ತಿಕ), ಕವಿತೆ ಬರೆಯುವುದು (Poetry) (ವೈಯಕ್ತಿಕ) (1000 ಪದಗಳಿಗೆ ಮೀರದಂತೆ) ಕಥೆ ಬರೆಯುವುದು (Story Wirting) (1000 ಪದಗಳಿಗೆ ಮೀರದಂತೆ), ಚಿತ್ರಕಲೆ (Painting) A3 Size I.e 11.7”x16.5”, Declamation (ಘೋಷಣೆ) ಭಾಷೆ: ಹಿಂದೆ ಮತ್ತು ಆಂಗ್ಲ ಭಾಷೆಯಲ್ಲಿರಬೇಕು. (ರಾಷ್ಟಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು) ಕನ್ನಡ ಭಾಷೆಯನ್ನು ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮದವರೆಗೆ ಮಾತ್ರ ಸೀಮಿತಗೊಳಿಸಿದೆ. ಸ್ಪರ್ಧಿಗಳು ಸಿದ್ಧಪಡಿಸಿಕೊಂಡಿರುವ ಆಯ್ಕೆ ವಿಷಯಗಳ ಬಗ್ಗೆ 3 ನಿಮಿಷಗಳ ಭಾಷಣ ಮಾಡಬೇಕು. ಗುಡಿ ಕೈಗಾರಿಕೆಯ ಕಲಾ ಪ್ರಕಾರ (Artisans of Handcrafts to Participate in Yuva Kirthi), ನೇಕಾರಿಕೆ/ಜವಳಿ (Textile), ಕೃಷಿ ಉತ್ಪನ್ನಗಳು (Agro Products) ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಸ್ಪರ್ಧೆಗಳಿಗೆ 15 ರಿಂದ 29 ವರ್ಷದೊಳಗಿನ ಯುವಕ/ಯುವತಿಯರು, ಶಾಲಾ/ಕಾಲೇಜುಗಳ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಮತ್ತು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ನೊಂದಾವಣೆಯಾದ ಯುವಕ ಸಂಘಗಳು, ಯುವತಿ ಮಂಡಳಿಗಳ ಪದಾಧಿಕಾರಿಗಳು ಭಾಗವಹಿಸಬಹುದಾಗಿದ್ದು, ಆಸಕ್ತರು ಡಿಸೆಂಬರ್ 04 ರಂದು ಬೆಳಿಗ್ಗೆ 9 ಗಂಟೆಗೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಸಂಘಟಿಕರಲ್ಲಿ ವರದಿ ಮಾಡಿಕೊಳ್ಳಬೇಕು.

ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದವರು 2024-25 ನೇ ಸಾಲಿನ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ. ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದ ಸ್ಪರ್ಧಾಳುಗಳಿಗೆ ನಗದು ಬಹುಮಾನ ಪ್ರಶಸ್ತಿ ಪತ್ರ ಮತ್ತು ಫಲಕಗಳನ್ನು ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ದೂ.ಸಂ: 0821-2564179 ಅನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಬಾಸ್ಕರ್ ನಾಯಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.