ಮೈಸೂರು, ಟಿ ನರಸೀಪುರದ 13 ನೇ ಕುಂಭಮೇಳ ವಿವರ

Spread the love

 

*13 ನೇ ಕುಂಭಮೇಳ*

ಮೈಸೂರು,- ಮೈಸೂರು ಜಿಲ್ಲಾಡಳಿತ ಹಾಗೂ ಕುಂಭಮೇಳ ಆಚರಣಾ ಸಮಿತಿ(ರಿ), ತ್ರಿವೇಣಿ ಸಂಗಮ ತಿ.ನರಸೀಪುರ, ಮೈಸೂರು ಜಿಲ್ಲೆ ಇವರ ಸಹಯೊಗದೊಂದಿಗೆ 13 ನೇ ಕುಂಭಮೇಳವನ್ನು ಫೆಬ್ರವರಿ 10, 11, ಮತ್ತು 12 ರಂದು ತಿ. ನರಸೀಪುರದ ಶ್ರೀ ಕ್ಷೇತ್ರ ತಿರುಮಕೂಡಲು ಇಲ್ಲಿ ಹಮ್ಮಿಕೊಳ್ಳಲಾಗಿದೆ.

ಫೆಬ್ರವರಿ 10 ರಂದು ಬೆಳಗ್ಗೆ 8.30 ಗಂಟೆಗೆ ಶ್ರೀ ಅಗಸ್ತ್ಯೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಅನುಜ್ಙಾ ಕಾರ್ಯಕ್ರಮ ಅಂಕುರಾರ್ಪಣೆ ಮತ್ತು ಧ್ವಜಾರೋಹಣವನ್ನು ನೇರವೇರಿಸಲಿದ್ದಾರೆ.

ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಹಾಗೂ ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಎಚ್.ಡಿ ಕುಮಾರಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪನವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರರಾದ ಕೆ.ವೆಂಕಟೇಶ್, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ, ವಿದಾನ ಸಭೆಯ ವಿರೋಧ ಪಕ್ಷದ ನಾಕರರಾದ ಆರ್ ಅಶೋಕ್ ಅವರು ಆಗಮಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಶಾಸಕರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಶಾಸಕರಾದ ಸುನಿಲ್ ಬೋಸ್ ಅವರು ಆಗಮಿಸಲಿದ್ದಾರೆ.
ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್.ಸಿ, ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷರಾದ ಎ.ಬಿ ರಮೇಶ್ ಬಂಡಿ ಸಿದ್ದೇಗೌಡ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್, ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಚಾಮರಾಜನಗರ ವಿಧಾನಸಭೆಯ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಹಾಗೂ ಬೆಂಗಳೂರು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಗೌರವ ಉಪಸ್ಥಿತರಿರಲಿದ್ದಾರೆ.

ಫೆಬ್ರವರಿ 11 ರಂದು ಬೆಳಗ್ಗೆ 11 ಗಂಟೆಗೆ ಧಾರ್ಮಿಕ ಸಭೆಯನ್ನು ಏರ್ಪಡಿಸಲಾಗಿದ್ದು, ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಎಚ್.ಡಿ ಕುಮಾರಸ್ವಾಮಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪನವರ ಘನ ಉಪಸ್ಥಿತಿಯಲ್ಲಿ, ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರರಾದ ಕೆ.ವೆಂಕಟೇಶ್ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಎಂ.ಬಿ. ಪಾಟೀಲ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಉನ್ನತ ಶಿಕ್ಷಣ ಸಚಿವರಾದ ಎಂ.ಸಿ. ಸುಧಾಕರ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಆಗಮಿಸಲಿದ್ದಾರೆ.

ಫೆಬ್ರವರಿ 12 ರಂದು ಬೆಳಗ್ಗೆ 12 ಗಂಟೆಗೆ ಧರ್ಮ ಸಭೆಯನ್ನು ಏರ್ಪಡಿಸಲಾಗಿದ್ದು, ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಹಾಗೂ ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಎಚ್.ಡಿ ಕುಮಾರಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪನವರು ಕಾರ್ಯಕ್ರಮ ಸಮಾರೋಪ ಭಾಷಣ ಮಾಡಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರರಾದ ಕೆ.ವೆಂಕಟೇಶ್, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ, ವಿದಾನ ಸಭೆಯ ವಿರೋಧ ಪಕ್ಷದ ನಾಕರರಾದ ಆರ್ ಅಶೋಕ್ ಅವರು ಆಗಮಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಗೃಹ ಸಚಿವರಾದ ಜಿ. ಪರಮೇಶ್ವರ್, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವ್ಯವಸ್ಥೆಯ ಸಚಿವರಾದ ಪ್ರಿಯಾಂಕ್ ಖರ್ಗೆ, ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ, ಸಹಕಾರ ಸಚಿವರು ಕೆ,ಎನ್. ರಾಜಣ್ಣ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಶಾಸಕರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಶಾಸಕರಾದ ಸುನಿಲ್ ಬೋಸ್, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್.ಸಿ, ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷರಾದ ಎ.ಬಿ ರಮೇಶ್ ಬಂಡಿ ಸಿದ್ದೇಗೌಡ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್, ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಚಾಮರಾಜನಗರ ವಿಧಾನಸಭೆಯ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಹಾಗೂ ಬೆಂಗಳೂರು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಆಗಮಿಸಲಿದ್ದಾರೆ.

ಎಲ್ಲಾ ಸಮಾರಂಭಗಳಲ್ಲಿ ಮುಖ್ಯ ಅತಿಥಿಗಳಾಗಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವಿರ್ ಸೇಠ್, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ ದೇವೇಗೌಡ, ಕೃಷ್ಣರಾಜನಗರ ವಿಧಾನಸಭಾ ಶಾಸಕರಾದ ರವಿಶಂಕರ್ ಡಿ, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಎಸ್.ಶ್ರೀವತ್ಸ, ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ದೃವನಾರಾಯಣ್, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಡಿ.ಹರೀಶ್ ಗೌಡ, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ, ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನರೇಂದ್ರಸ್ವಾಮಿ, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ರವಿ ಗಣೀಗ, ಮದ್ದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಎಂ ಉದಯ್, ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಟಿ. ಮಂಜು, ಕೊಳ್ಳೇಗಾಲ ಕ್ಷೇತ್ರದ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಎಂ. ಗಣೇಶ್ ಪ್ರಸಾದ್, ಹನೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಆರ್ ಮಂಜು, ಹಾಗೂ ವಿಧಾನ ಪರಿಷತ್ನ ಸದಸ್ಯರುಗಳಾದ ಹೆಚ್.ವಿಶ್ವನಾಥ್, ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮಧು ಜಿ.ಮಾದೇಗೌಡ, ಯತಿಂದ್ರ.ಎಸ್ ಮತ್ತು ವಿವೇಕಾನಂದ.ಕೆ ಹಾಗೂ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್ ಹಾಗೂ ಕಾವೇರಿ ಜಲಾನಯನ ಯೋಜನೆಯ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷರಾದ ಮರಿಸ್ವಾಮಿ, ಟಿ.ನರಸೀಪುರ ಪುರಸಭೆ ಅಧ್ಯಕ್ಷರಾದ ವಸಂತ ಶ್ರೀಕಂಠ ಅವರು ಅಥಿತಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಠಾರಿಯಾ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಲೋಕೋಪಯೋಗಿ ಇಲಾಖೆಯ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಎಸ್. ಸೆಲ್ವಕುಮಾರ್ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾದ ಡಾ.ವೆಂಕಟೇಶ್ ಅವರು ಆಗಮಿಸಲಿದ್ದಾರೆ.