ಮೈಸೂರು-2025 ನೇ ಹೊಸ ವರ್ಷಾಚರಣೆಯಲ್ಲಿ ಪಾಲಿಸಬೇಕಾದ ನಿಯಮ

Spread the love

 

2025 ನೇ ಹೊಸ ವರ್ಷಾಚರಣೆಯಲ್ಲಿ ಪಾಲಿಸಬೇಕಾದ ನಿಯಮಗಳು.
***
2025ರ ಹೊಸ ವರ್ಷದ ಆಚರಣೆಯ ಸಂಬಂಧ ಮೈಸೂರು ನಗರದಲ್ಲಿ ಸಾರ್ವಜನಿಕರು ಹೊಸ ವರ್ಷಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಣೆ ಮಾಡಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯನ್ನು ಆದ್ಯತೆಯನ್ನಾಗಿ ಪರಿಗಣಿಸಿ ನಗರದಾದ್ಯಂತ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿರುತ್ತದೆ.
1. ಸಾರ್ವಜನಿಕರಿಗೆ ಶುಭ ಕೋರುವ ನೆಪದಲ್ಲಿ ಕೀಟಲೆ/ಅಸಭ್ಯವಾಗಿ ವರ್ತಿಸುವುದನ್ನು ತಡೆಯಲು ನಗರದಲ್ಲಿ ಪೊಲೀಸ್ ನಿರೀಕ್ಷಕರುಗಳು ನೇತೃತ್ವದಲ್ಲಿ ಠಾಣಾವಾರು ವಿಶೇಷ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದೆ. ಸದರಿ ಕಾರ್ಯಪಡೆಗಳು ಕಾರ್ಯನಿರತವಾಗಿದ್ದು ಅಂತವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು.
2. ಮಹಿಳೆಯರ ರಕ್ಷಣೆಯ ಹಿತದೃಷ್ಟಿಯಿಂದ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಒಳಗೊಂಡ ಸುರಕ್ಷತಾ ಪಿಂಕ್ ಗರುಡಾ ( ಚಾಮುಂಡಿ ಪಡೆ) ಪಡೆಗಳು ಗಸ್ತಿನಲ್ಲಿರುತ್ತದೆ.
3. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶ್ವಾನದಳ ಮತ್ತು ವಿಧ್ವಂಸಕ ಕೃತ್ಯ ತಡೆ ತಂಡದಿಂದ ತಪಾಸಣೆ ನಡೆಸಲಾಗುವುದು.
4. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿ ಕಣ್ಣಾವಲು ನಿರ್ವಹಿಸಲಾಗುತ್ತದೆ.
5. ಹೊಸವರ್ಷಾಚರಣೆ ನೆಪದಲ್ಲಿ ವಾಹನಗಳನ್ನು ವೀಲಿಂಗ್ (wheeling) ಮತ್ತು ಡ್ರಾಗ್ ರೇಸ್ ಮಾಡುವುದನ್ನು ಹಾಗೂ ಕರ್ಕಶ ಶಬ್ದ ಮಾಡುವುದನ್ನು ತಡೆಗಟ್ಟಲು ಸಂಚಾರ ಪೊಲೀಸರು ಒಳಗೊಂಡ ಕ್ಷಿಪ್ರ ಕಾರ್ಯಪಡೆಗಳನ್ನು ರಚಿಸಲಾಗಿದೆ. ಸದರಿ ಪಡೆಯು ಮೈಸೂರು ನಗರದ ಎಲ್ಲಾ ಪ್ರದೇಶಗಳಲ್ಲಿ ಚಾಲನೆಯಲ್ಲಿರುತ್ತದೆ, ಕಾನೂನು ಉಲ್ಲಂಘಿಸುವ ಪ್ರಕರಣಗಳು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು.
6. ಅತಿವೇಗವಾಗಿ ಮತ್ತು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡುವವರ ಮತ್ತು ಕಿಡಿಗೇಡಿಗಳ ಬಗ್ಗೆ ನಿಗಾವಹಿಸಲು ಚೆಕ್‌ ಪೋಸ್ಟ್‌ಗಳನ್ನು ತೆರೆಯುವದರ ಜೊತೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ 112 ವಾಹನ, ಹೈವೇ ಪೆಟ್ರೋಲ್ ವಾಹನಗಳನ್ನು ನಿಯೋಜಿಸಲಾಗುವುದು.