ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘ ತೀವ್ರ ಖಂಡನೆ

Spread the love

 

 

 

ಬೆಲೆ ಏರಿಕೆಯ ಪರಿಣಾಮವಾಗಿ ಮಕ್ಕಳ ಅಪೌಷ್ಟಿಕತೆಯು ಹೆಚ್ಚುತ್ತಿರುವ ಪರಿಸ್ಥಿತಿಯಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯ ನಿಧಿಯ ಹಂಚಿಕೆಯಲ್ಲಿ ಪುಡಿಗಾಸಿನ ಏರಿಕೆಯನ್ನು ಎ ಐ ಯು ಟಿ ಯು ಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘ ತೀವ್ರವಾಗಿ ಖಂಡಿಸುತ್ತದೆ.

ವಿಶ್ವದ ಮೂರನೇ ಒಂದು ಭಾಗದಷ್ಟು ಅಪೌಷ್ಟಿಕ ಮಕ್ಕಳು ಭಾರತದಲ್ಲಿ ವಾಸಿಸುತ್ತಾರೆ. ಹಸಿವಿನ ಸೂಚ್ಯಂಕದಲ್ಲಿ 127
ದೇಶಗಳಲ್ಲಿ ಭಾರತ 105ನೇ ಸ್ಥಾನ ಪಡೆದಿದೆ. ಶೇ.31.7 ರಷ್ಟು ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಕುಂಠಿತ ಬೆಳವಣಿಗೆಯಿಂದ ಬಳಲುತ್ತಿದ್ದಾರೆ ಹಾಗೂ 50,000ಕ್ಕೂ ಅಧಿಕ ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ನರಳುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಅಪೌಷ್ಟಿಕತೆಯಿಂದ ಬಳಲುವ 11 ಲಕ್ಷಕ್ಕೂ ಅಧಿಕ ಮಕ್ಕಳು ಯಾವುದೇ ಆರೋಗ್ಯ ಕೇಂದ್ರಗಳಲ್ಲಿ ದಾಖಲಾಗದೆ ಬದುಕು ಸವೆಸುತ್ತಿವೆ.

“ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಉದಾರವಾಗಿ ತೆರಿಗೆ ಮನ್ನಾ ನೀಡುತ್ತಿರುವಾಗ, ಸಾವಿರಾರು ಕೋಟಿ ಬ್ಯಾಂಕ್ ಸಾಲ ಸುಸ್ತಿದಾರರಿಗೆ ಮಾಫಿ ಮಾಡುತ್ತಿರುವಾಗ ಮತ್ತು ಏಕಸ್ವಾಮ್ಯ ಸಂಸ್ಥೆಗಳು ಮತ್ತು ಬಹುರಾಷ್ಟ್ರೀಯ ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡುತ್ತಿರುವಾಗ – ಶಾಲಾ ವಿದ್ಯಾರ್ಥಿಗಳ ಬಿಸಿಯೂಟ ಯೋಜನೆಯಡಿ ಪ್ರತಿ ವಿದ್ಯಾರ್ಥಿಗೆ ಹೆಚ್ಚಿಸಿರುವ ಅನುದಾನ ತೀರ ಕಡಿಮೆಯಾಗಿದೆ. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ (1 ರಿಂದ 5 ನೇ ತರಗತಿ) 74 ಪೈಸೆ ಹೆಚ್ಚಳವಾದರೆ, ಮಾಧ್ಯಮಿಕ ವಿದ್ಯಾರ್ಥಿಗಳಿಗೆ ರೂ.1.12 ಹೆಚ್ಚಳವಾಗಿದೆ (ವರ್ಗ VI ರಿಂದ VIII). ಅಂದರೆ, ಒಟ್ಟು ಪ್ರಾಥಮಿಕ ವಿದ್ಯಾರ್ಥಿಗಳಿಗೆ ರೂ 6.19 ಮತ್ತು ಮಾಧ್ಯಮಿಕ ವಿದ್ಯಾರ್ಥಿಗಳಿಗೆ ರೂ 9.29 ವಿನಿಯೋಗವಾಗುತ್ತದೆ.

ಬಡತನದಿಂದ ಬಳಲುತ್ತಿರುವ ಶಾಲಾ ಮಕ್ಕಳಿಗೆ ಕನಿಷ್ಠ ಪೌಷ್ಟಿಕಾಂಶ ಒದಗಿಸುವುದಕ್ಕಾಗಿ ಸಮರ್ಪಕ ನಿಧಿಯನ್ನು ನೀಡಬೇಕು ಹಾಗೂ ಪೌಷ್ಟಿಕಾಂಶವುಳ್ಳ ಆಹಾರ ತಯಾರಿಸುವ ಬಿಸಿಯೂಟ ಸಿಬ್ಬಂದಿಗಳ ಕೆಲಸ ಖಾಯಂ ಸ್ವರೂಪದ್ದಾಗಿರುವುದರಿಂದ ಅವರ ಕೆಲಸವನ್ನು ಖಾಯಂಗೊಳಿಸಬೇಕೆಂದು ಈ ಸಂದರ್ಭದಲ್ಲಿ ಆಗ್ರಹಿಸುತ್ತೇವೆ ರಾಜ್ಯ ಕಾರ್ಯದರ್ಶಿ ಸಂಧ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ