ಸಾರ್ವಜನಿಕರಿಗೆ, ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್, ಹೋಂ ಸ್ಟೇ, ಸರ್ವಿಸ್ ಅಪಾರ್ಟ್‌ ಮೆಂಟ್, ಅಪಾರ್ಟ್‌ ಮೆಂಟ್ ಅಸೋಸಿಯೇಷನ್, ಮಾಲ್ ಮತ್ತು ಸಂಘ ಸಂಸ್ಥೆಗಳಿಗೆ ಕಟ್ಟುನಿಟ್ಟಾದ. ಸೂಚನೆ .

Spread the love

 

ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟಾಗದಂತೆ ಕ್ರಮ ವಹಿಸಲು ಸಾರ್ವಜನಿಕರಿಗೆ, ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್, ಹೋಂ ಸ್ಟೇ, ಸರ್ವಿಸ್ ಅಪಾರ್ಟ್‌ ಮೆಂಟ್, ಅಪಾರ್ಟ್‌ ಮೆಂಟ್ ಅಸೋಸಿಯೇಷನ್, ಮಾಲ್ ಮತ್ತು ಸಂಘ ಸಂಸ್ಥೆಗಳಿಗೆ ಈ ಕೆಳಕಂಡ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳುವಳಿಕೆ ನೀಡಲಾಗಿದೆ.
1. ದಿನಾಂಕ: 31-12-2024 ರ ರಾತ್ರಿ ಆರಂಭವಾಗುವ ಹೊಸ ವರ್ಷಾಚರಣೆಯನ್ನು ಆಚರಿಸುವ ನಗರದ ಎಲ್ಲಾ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಹೋಂ ಸ್ಟೇ, ಸರ್ವಿಸ್ ಅಪಾರ್ಟ್‌ ಮೆಂಟ್, ಅಪಾರ್ಟ್‌ಮೆಂಟ್ ಅಸೋಸಿಯೇಷನ್, ಮಾಲ್ಸ್ ಮತ್ತು ಸಂಘಸಂಸ್ಥೆಗಳು ಪೊಲೀಸ್ ಆಯುಕ್ತರ ಕಛೇರಿಯಿಂದ ಅನುಮತಿ ಪಡೆದು ಮಧ್ಯರಾತ್ರಿ 1-00 ಗಂಟೆಯೊಳಗೆ ಕಡ್ಡಾಯವಾಗಿ ಮುಕ್ತಾಯಗೊಳಿಸುವುದು. ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸುವುದು.
2. ಯಾವುದೇ ಪ್ರಕರಣಗಳು ಸಂಭವಿಸಿದ್ದಲ್ಲಿ ಸದರಿ ಪ್ರಕರಣಗಳನ್ನು ಪತ್ತೆ ಹಚ್ಚಲು ಸಹಕಾರಿಯಾಗುವಂತೆ ಸಾರ್ವಜನಿಕರು ತಮ್ಮ ಅಂಗಡಿ, ಮನೆ ಇತ್ಯಾದಿ ಸ್ಥಳಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳುವುದು.
3. ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ತಮ್ಮ ಪ್ರದೇಶಕ್ಕೆ ಮಾತ್ರ ಸೀಮಿತವಾಗಿರುವಂತೆ ಧ್ವನಿವರ್ಧಕವನ್ನು ಅಳವಡಿಸಿಕೊಂಡು ಶಬ್ಧವು ಕಾನೂನಿನ ಅಡಿಯಲ್ಲಿ ನಿರ್ಧಿಷ್ಟ ಪಡಿಸಿರುವ ಡೆಸಿಬಲ್‌ಗಳನ್ನು ಮೀರದಂತೆ ಕಡಿಮೆ ಧ್ವನಿಯಲ್ಲಿ ಕಾರ್ಯಕ್ರಮವನ್ನು ನಡೆಸಬೇಕು.
ಹೊಸ ವರ್ಷ ಆಚರಣೆಯ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ನೆಪದಲ್ಲಿ ಅಶ್ಲೀಲ, ಅರೆಬೆತ್ತಲೆ, ಮಾದಕ ವಸ್ತುಗಳ ಸೇವನೆ, ಜೂಜಾಟ ನಡೆಸುವುದನ್ನು ನಿಷೇಧಿಸಿದ್ದು, ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರನ್ನು ಬಲವಂತವಾಗಿ ನಿಲ್ಲಿಸಿ ಅವರ ಇಚ್ಛೆಗೆ ವಿರುದ್ಧವಾಗಿ ಶುಭ ಕೋರುವ ನೆಪದಲ್ಲಿ ಕಿರಿಕಿರಿ ಉಂಟುಮಾಡಿದ್ದಲ್ಲಿ ಕಾನೂನು ರೀತ್ಯಾ ಕ್ರಮ ವಹಿಸಲಾಗುವುದು.
5. ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ದಿನಾಂಕ 31-12-2024 ರ ರಾತ್ರಿ 7-00 ಗಂಟೆ ನಂತರ ಚಾಮುಂಡಿಬೆಟ್ಟಕ್ಕೆ ಉತ್ತನಹಳ್ಳಿ ಕ್ರಾಸ್ ಗೇಟ್, ದೇವಿವನ ಗೇಟ್, ಚಾಮುಂಡಿಬೆಟ್ಟ ಪಾದದ ಗೇಟ್. ಲಲಿತಮಹಲ್ ಗೇಟ್ ಮೂಲಕ ಪ್ರವೇಶವನ್ನು ನಿರ್ಭಂದಿಸಲಾಗಿದೆ. ತಾವರೆಕಟ್ಟೆ ಗೇಟ್ ಮುಖಾಂತರ ದಿನಾಂಕ: 31-12-2024 ರ ರಾತ್ರಿ 8-00 ಗಂಟೆಯಿಂದ ದಿನಾಂಕ 01-01-2025 ರ ಬೆಳಿಗ್ಗೆ 6.00 ಗಂಟೆಯವರೆಗೆ ಪ್ರವೇಶವನ್ನು ನಿರ್ಭಂಧಿಸಲಾಗಿದೆ. ಚಾಮುಂಡಿಬೆಟ್ಟಕ್ಕೆ ಯಾವುದೇ ರೀತಿಯ ಊಟ, ಮದ್ಯದ ಬಾಟಲಿಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ರಾತ್ರಿ 9-00 ಗಂಟೆ ನಂತರ ಸಾರ್ವಜನಿಕರು ಚಾಮುಂಡಿಬೆಟ್ಟದಿಂದ ವಾಪಸ್ಸು ಬರುವಂತೆ ಸೂಚಿಸಲಾಗಿದೆ. ಇದು ಚಾಮುಂಡಿ ಬೆಟ್ಟದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಹಾಗೂ ಚಾಮುಂಡಿ ಬೆಟ್ಟದಲ್ಲಿ ವಾಸಿಸುವವರಿಗೆ ಅನ್ವಯಿಸುವುದಿಲ್ಲ. ಚಾಮುಂಡಿಬೆಟ್ಟದಿಂದ ರಾತ್ರಿ 9-00 ಗಂಟೆ ನಂತರ ವಾಪಸ್ಸು ಬರುವವರು ತಾವರೆಕಟ್ಟೆ ದ್ವಾರದ ಮುಖಾಂತರ ಬರುವಂತೆ ಸೂಚಿಸಲಾಗಿದೆ.
6. ರಸ್ತೆಗಳಲ್ಲಿ, ಪಾರ್ಕ್‌ಗಳಲ್ಲಿ ವಾಹನಗಳಲ್ಲಿ ಕುಳಿತು ಮದ್ಯಪಾನ ಮಾಡುವವರ ವಿರುದ್ದ ಕಾನೂನು ರೀತ್ಯಾ ಪ್ರಕರಣ ದಾಖಲು ಮಾಡಲಾಗುವುದು.
7. ಸೋಷಿಯಾಲ್ ಮೀಡಿಯಾ ಮೂಲಕ ಹೊಸ ವರ್ಷಾಚರಣೆ ಸಂಬಂಧ ಅಪಪ್ರಚಾರ ಪೋಸ್ಟ್‌ಗಳನ್ನು ಹಾಕಿದ್ದಲ್ಲಿ ಸದರಿಯವರ ವಿರುದ್ದ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು.
8. ಹೊಸ ವರ್ಷದ ಸಂಬಂಧ ಸಾಮಾಜಿಕ ಜಾಲಾತಾಣಗಳ ಮೂಲಕ ಉಡುಗೊರೆ ನೀಡುವ / ಉಡುಗೊರೆ ಬಂದಿರುವ ನೆಪದಲ್ಲಿ ಕಳುಹಿಸುವ ಯಾವುದೇ ಅಪರಿಚಿತ ಅಂಕ್‌ ಗಳಿಗೆ ಮರುಳಾಗಿ ಡಿಜಿಟಲ್ ಮೋಸಕ್ಕೆ ಒಳಗಾಗದಂತೆ ಎಚ್ಚರಿಕೆ ವಹಿಸುವುದು.
ಮೇಲ್ಕಂಡ ಸೂಚನೆಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಿ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಆಸ್ಪದ ಕೂಡದೆ ಇತರರಿಗೆ ತೊಂದರೆಯಾಗದಂತೆ ಹೊಸ ವರ್ಷಾಚರಣೆಯನ್ನು ಆಚರಿಸಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರೊಂದಿಗೆ ಸಹಕರಿಸಲು
ಸಾರ್ವಜನಿಕ ಸಂಪರ್ಕಾಧಿಕಾರಿಗಳು, ಪೊಲೀಸ್ ಆಯುಕ್ತರವರ ಕಛೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ