ಎಟಿಎಮ್ ದರೋಡೆ – ಈರ್ವರ ದುರ್ಮರಣ

Spread the love

ಬೀದರ್ :
ಎಸ್ಬಿಐ ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಎಟಿಎಂಗೆ ಹಾಕಲು ಸಾಗಿಸುತ್ತಿದ್ದ ಹಣವನ್ನು ಸಿನಿಮಾ ಶೈಲಿಯಲ್ಲಿ ಲೂಟಿ ಮಾಡಿ ಪರಾರಿಯಾದ ಘಟನೆ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ‌ ನಡೆದಿದೆ. ಈ ವೇಳೆ ಎಸ್ಬಿಐ ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ಮೇಲೆ ಖಾರದ ಪುಡಿ ಎರಚಿ, ಗುಂಡು ಹಾರಿಸಿದ್ದರಿಂದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಬೀದರಿನ ಶಿವಾಜಿ ಸರ್ಕಲ್ ಬಳಿಯ ಹೃದಯ ಭಾಗದಲ್ಲಿರುವ ಎಸ್ಬಿಐ ಬ್ಯಾಂಕ್ ಮೇನ್ ಬ್ರ್ಯಾಂಚ್ ಮುಂದೆ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನ ಗಿರೀಶ್ ಎಂದು ಗುರುತಿಸಲಾಗಿದೆ. ಶಿವಾ ಕಾಶಿನಾಥ ಎಂಬುವರು ಇನ್ನೊಬ್ಬ ಸಿಬ್ಬಂದಿಯಾಗಿದ್ದಾರೆ. ಬ್ಯಾಂಕಿನ ಕಚೇರಿ ಎದುರು ಗಿರೀಶ್ ಮೃತದೇಹ ರಕ್ತಸಿಕ್ತವಾಗಿ ಬಿದ್ದಿರುವುದು ಕಂಡುಬಂದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.