ಬೆಂಗಳೂರು- ವಕ್ ಫ್ ಬೋರ್ಡ್ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಭಾರತೀಯ ಜನತಾ ಪಕ್ಷದ ವತಿಯಿಂದ ನಡೆಸಲಾಗುವುದು ಎಂದು ಮಾಜಿ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಅವರು ತಿಳಿಸಿದ್ದಾರೆ.
ಪ್ರತಿಭಟನೆಯು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ನಡೆಯಲಿದೆ ಎಂದು ಹೇಳಿದ್ದಾರೆ.
ನವೆಂಬರ್ 21-22 ವರಗೆ ಪ್ರತಿಭಟನೆ ನಡೆಯಲಿದೆ.
ಭಾರತೀಯ ಜನತಾ ಪಕ್ಷದ ಮೂರು ತಂಡಗಳು ಪ್ರತಿಭಟನೆಯ ನೇತೃತ್ವವನ್ನು ವಹಿಸಲಿದೆ ಎಂದು ವಿವರ ನೀಡಿದರು. ಡಿಸೆಂಬರ್ ಮೊದಲ ವಾರದಲ್ಲಿ ರೈತರು ಹಾಗೂ ಮಠಾಧಿಪತಿಗಳಿಂದ ಮನವಿ ಸ್ವೀಕರಿಸಲಾಗುವುದು ಎಂದು ತಿಳಿಸಿದರು. ಮುಂದಿನ ಬೆಳಗಾವಿ ಅಧಿವೇಶನದಲ್ಲಿ ಸಂಪೂರ್ಣವಾಗಿ ವರದಿ ಸಲ್ಲಿಸಿ, ಚರ್ಚಿಸಲಾಗುವುದು ಎಂದು ಅಶ್ವಥ್ ನಾರಾಯಣ್ ಅವರು ತಿಳಿಸಿದ್ದಾರೆ