ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ಕರ್ನಾಟಕ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದು ಕನಿಷ್ಠ 8 ಜನರು ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ ಸಂಜೆ 4.19 ಕ್ಕೆ ಪರಂಡ ರೈಲು ನಿಲ್ದಾಣದ ಬಳಿ ಈ ಭೀಕರ ರೈಲು ಅಪಘಾತ ಸಂಭವಿಸಿದೆ.
ರೈಲ್ವೆ ಅಧಿಕಾರಿಗಳ ಪ್ರಕಾರ, ಪುಷ್ಪಕ್ ಎಕ್ಸ್‌ಪ್ರೆಸ್‌ನಲ್ಲಿದ್ದ ಪ್ರಯಾಣಿಕರು ಚಲಿಸುತ್ತಿದ್ದ ರೈಲಿನ ಚಕ್ರಗಳಿಂದ ಹೊಗೆ ಹೊರಬಂದ ನಂತರ ಬೆಂಕಿ ಬೀಳಬಹುದೆಂಬ ಭಯದಿಂದ ತಪ್ಪಿಸಿಕೊಳ್ಳಲು ಹಳಿಗಳ ಮೇಲೆ ಆತುರದಿಂದ ಹಾರಿದಾಗ ಈ ದುರಂತ ಸಂಭವಿಸಿದೆ. ರೈಲು ಲಕ್ನೋದಿಂದ ಮುಂಬೈಗೆ ಹೋಗುತ್ತಿತ್ತು. ಪ್ರಯಾಣಿಕರು ಹಳಿಗಳ ಮೇಲೆ ಹಠಾತ್ತಾಗಿ ಬಿದ್ದಾಗ ಅನಾಹುತವು ಸಂಭವಿಸಿದೆ.
ಆ ಕ್ಷಣದಲ್ಲಿಯೇ, ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್, ಹಳಿಗಳ ಮೇಲೆ ಹಾರಿದ ಪ್ರಯಾಣಿಕರಿಗೆ ಡಿಕ್ಕಿ ಹೊಡೆದಿದೆ.
“ಪುಷ್ಪಕ್ ಎಕ್ಸ್‌ಪ್ರೆಸ್‌ನ ಕೆಲವು ಪ್ರಯಾಣಿಕರು ಕೆಳಗಿಳಿದು, ಮುಂದೆ ಬರುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದಿದ್ದಾರೆ” ಎಂದು ಸೆಂಟ್ರಲ್ ರೈಲ್ವೆಯ ಮುಖ್ಯ ವಕ್ತಾರ ಸ್ವಪ್ನಿಲ್ ನೀಲಾ ಹೇಳಿಕೆ ನೀಡಿದ್ದಾರೆ.
ಪುಷ್ಪಕ್ ರೈಲು ಅಪಘಾತದ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳಿಗೆ ಸಾಕಷ್ಟು ವೈದ್ಯಕೀಯ ಚಿಕಿತ್ಸೆ ನೀಡುವಂತೆ ಆದೇಶಿಸಿದ್ದಾರೆ.
ಕರ್ನಾಟಕ ಎಕ್ಸ್‌ಪ್ರೆಸ್ ರೈಲು ದುರಂತ – 6 ಜನರ ದುರ್ಮರಣ
