ಲಷ್ಕರ್ ಠಾಣಾ ಪೊಲೀಸರಿಂದ ಕೆ.ಎಸ್.ಆರ್.ಟಿ.ಸಿ ಬಸ್‌ಸ್ಟ್ಯಾಂಡ್‌ನಲ್ಲಿ ಮಹಿಳಾ ಪ್ರಯಾಣಿಕರ ಮಾಂಗಲ್ಯ ಸರಗಳನ್ನು ಕಳ್ಳತನ ಮಾಡುತ್ತಿದ್ದ ಒಬ್ಬ ಮಹಿಳಾ ಆರೋಪಿಯ ಬಂಧನ, ಒಟ್ಟು 3,90,000/- ರೂ ಮೌಲ್ಯದ 56 ಗ್ರಾಂ ತೂಕದ 02 ಚಿನ್ನದ ಮಾಂಗಲ್ಯ ಸರ ವಶಪಡಿಸಿಕೊಳ್ಳಲಾಗಿದೆ.
ಮೈಸೂರು ನಗರದ ಲಷ್ಕರ್ ಠಾಣಾ ವ್ಯಾಪ್ತಿಯ ಗ್ರಾಮಾಂತರ ಕೆ.ಎಸ್.ಅರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರ ಕತ್ತಿನಲ್ಲಿದ್ದ ಚಿನ್ನದ ಸರಗಳನ್ನು ಕಳ್ಳತನ ಮಾಡುತ್ತಿದ್ದ ಪ್ರಕರಣಗಳಲ್ಲಿ ಆರೋಪಿ ಮತ್ತು ಮಾಲು ಪತ್ತೆ ಬಗ್ಗೆ ಲಷ್ಕರ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಯವರುಗಳು ದ 03. ರಂದು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಗಸ್ತಿನಲ್ಲಿರುವಾಗ್ಗೆ ಬಸ್ ನಿಲ್ದಾಣದಲ್ಲಿ ಅನುಮಾನಸ್ಪಾದವಾಗಿ ಓಡಾಡುತ್ತಿದ್ದ ಒಬ್ಬ ಮಹಿಳೆಯನ್ನು ವಿಚಾರಣೆಗೆ ಠಾಣೆಗೆ ಹಾಜರುಪಡಿಸಿದ್ದು. ಸದರಿ ಮಹಿಳೆಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಗ್ರಾಮಾಂತರ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರ ಕತ್ತಿನಲ್ಲಿದ್ದ ಚಿನ್ನದ ಮಾಂಗಲ್ಯ ಸರಗಳನ್ನು ಕಳುವು ಮಾಡಿರುವುದಾಗಿ ಒಪ್ಪಿಕೊಂಡ ಮೇರೆಗೆ ಲಷ್ಕರ್ ಪೊಲೀಸ್ ಠಾಣೆಯ 2 ಪ್ರಕಣಗಳಿಗೆ ಸಂಬಂಧಪಟ್ಟಂತೆ ಆರೋಪಿತಳಿಂದ ಒಟ್ಟು 3.90,000/- ಮೌಲ್ಯದ 56 ಗ್ರಾಂ ತೂಕದ 02 ಚಿನ್ನದ ಮಾಂಗಲ್ಯ ಸರಗಳನ್ನು ವಶಪಡಿಸಿಕೊಂಡಿರುತ್ತಾರೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಕೇಂದ್ರಸ್ಥಾನ, ಅಪರಾದ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತರವರ ಮಾರ್ಗದರ್ಶನದಲ್ಲಿ ದೇವರಾಜ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶಾಂತಮಲ್ಲಪ್ಪ. ಎಸ್ ರವರ ಉಸ್ತುವಾರಿಯಲ್ಲಿ ಲಷ್ಕರ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಸಾದ್ ಕೆ.ಆರ್, ಪಿ.ಎಸ್.ಐ ರವರಾದ ರಾಧಾ ಎಂ. ಅನಿಲ್‌ಕುಮಾರ್ ವನ್ನೂರ್ ಎಸ್.ಎಸ್.ಐ ರವರಾದ ಲೋಕೇಶ್ ಮತ್ತು ಸಿಬ್ಬಂದಿಯವರುಗಳಾದ ಸುರೇಶ್, ರವಿಕುಮಾರ್, ಗಿರೀಶ್. ಮಂಜುನಾಥ್, ಚೌಡಪ್ಪ ಪಾಸೀಗರ್, ಅಬ್ದುಲ್ ರೆಹಮಾನ್, ಚಿಕ್ಕಣಸ್ವಾಮಿ, ಅಶ್ವಿನಿ ಹಳವಾರ ರವರುಗಳು ಕೈಗೊಂಡಿರುತ್ತಾರೆ.