ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ರವರ ಅಂತಿಮ ವಿಧಿ-ವಿಧಾನಕ್ಕೆ ಸಕಲ ಸಿದ್ಧತೆ
ಮಂಡ್ಯ.ಡಿ.12 :- ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ರವರ ಅಂತಿಮ ಸಂಸ್ಕರವನ್ನು “ಮದ್ದೂರು ತಾಲ್ಲೂಕು ಬೆಂಗಳೂರು-ಮೈಸೂರು ಹೆದ್ದಾರಿಯ ಸೋಮನಹಳ್ಳಿ ಕಾಫಿ ಡೇ” ಹತ್ತಿರದ ಖಾಲಿ ಜಾಗದಲ್ಲಿ ನೆರವೇರಿಸಲು ಸಿದ್ಧತೆಗಳು ಪ್ರಾರಂಭವಾಗಿರುತ್ತದೆ.
ಉಪಮುಖ್ಯಮAತ್ರಿಗಳಾದ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ಸಂದರ್ಭದಲ್ಲಿ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ಉದಯ್, ಜಿಲ್ಲಾಧಿಕಾರಿ ಡಾ: ಕುಮಾರ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.