ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ

Spread the love

 

ದೆಹಲಿ ದೇಶದ ಆರ್ಥಿಕ ಮಹಾನ್ ತಜ್ಞ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ವಿಧಿವಶರಾದನೆಂದು ತಿಳಿಸಲು ವಿಷಾದಿಸುತ್ತೇವೆ.

ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ಏಮ್ಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ದೇಶದ ಹದಿನಾಲ್ಕನೇ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಅನಾರೋಗ್ಯದಿಂದ ಇಂದು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.
2004 ರಿಂದ 2014ರ ಅವಧಿಯಲ್ಲಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರ ನಿಧನಕ್ಕೆ ದೇಶದಾದ್ಯಂತ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಪಂಜಾಬಿನಲ್ಲಿ 1932 ನೇ ಇಸವಿಯಲ್ಲಿ ಗಾಹ್ ಸ್ಥಳದಲ್ಲಿ ಜನಿಸಿದ್ದರು.
ಮೈಸೂರಿನ ನಗರದ ಅವಧೂತಪೀಠದ ಶ್ರೀ ಶ್ರೀ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ .
ನಾಳೆ ಬೆಳಗಾವಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮಗಳೆಲ್ಲ ರದ್ದಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಸರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿಯವರು ದೆಹಲಿಗೆ ತೆರಳುತ್ತಿದ್ದಾರೆ.