* ಮುಖ್ಯಮಂತ್ರಿಗಳ ಮೈಸೂರು ಜಿಲ್ಲಾ ಪ್ರವಾಸ*
ಮೈಸೂರು,ನ.11 ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನವೆಂಬರ್ 12 ಮತ್ತು 13 ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ.
*ನವೆಂಬರ್ 12 ರಂದು ಬೆಳಗ್ಗೆ 11.30 ಗಂಟೆಗೆ ಹೆಚ್.ಡಿ ಕೋಟೆಗೆ ಆಗಮಿಸಿ, ಹೆಗ್ಗಡದೇವನಕೋಟೆ ಮತ್ತು ಸರಗೂರು ತಾಲ್ಲೂಕು ನಾಯಕರ ಸಂಘದ ವತಿಯಿಂದ ಹೆಚ್.ಡಿ.ಕೋಟೆಯ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿರುವ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ* ಪಾಲ್ಗೊಳ್ಳಲಿದ್ದು, ಮಧ್ಯಾಹ್ನ 12.30 ಗಂಟೆಗೆ ಹೆಚ್.ಡಿ.ಕೋಟೆ ತಾಲ್ಲೂಕಿನ ಕೆರೆ-ಸೀಗೂರು ಹಾಡಿಗಳಿಗೆ ಭೇಟಿ ಹಾಗೂ ಬುಡಕಟ್ಟು ಜನಾಂಗಗಳ ಸಮಸ್ಯೆಗಳ ಆಲಿಸುವರು.
*ನವೆಂಬರ್ 13 ರಂದು ಬೆಳಗ್ಗೆ 10.30 ಗಂಟೆಗೆ ಉನ್ನತ ಶಿಕ್ಷಣ ಇಲಾಖೆ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ವಸತಿ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ* ಮೈಸೂರಿನ ಮಹಾರಾಜ ಪಿ.ಯು.ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿರುವ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಲಿದ್ದು, ಮಧ್ಯಾಹ್ನ 12 ಗಂಟೆಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ತಿ.ನರಸೀಪುರ ತಾಲ್ಲೂಕಿನ ಸೋಸಲೆ ಹೋಬಳಿಯ ಹೊರಳಹಳ್ಳಿ ರೇಷ್ಮೆ ಫಾರಂನಲ್ಲಿರುವ ಮುರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಆಯೋಜಿಸಲಾಗಿರುವ ತಿ.ನರಸೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.