ಮೈಸೂರು ವಿಶ್ವವಿದ್ಯಾನಿಲಯದ 105 ನೇ ವಾರ್ಷಿಕ ಘಟಿಕೋತ್ಸವ ಸಮಾರಂಭ

Spread the love

 

ಮೈಸೂರು ವಿಶ್ವವಿದ್ಯಾನಿಲಯದ 105 ನೇ ವಾರ್ಷಿಕ ಘಟಿಕೋತ್ಸವ ಸಮಾರಂಭ*

ಮೈಸೂರು,ಜ.16- ಮೈಸೂರು ವಿಶ್ವವಿದ್ಯಾನಿಲಯದ 105 ನೇ ವಾರ್ಷಿಕ ಘಟಿಕೋತ್ಸವವನ್ನು ಜನವರಿ 18 ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಮೈಸೂರು ವಿಶ್ವವಿದ್ಯಾನಿಲಯದ ಕರ್ನಾಟಕ ರಾಜ್ಯದ ರಾಜ್ಯಪಾಲರು ಹಾಗೂ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ನವದೆಹಲಿಯ ಬಯೋಫಿಸಿಕ್ಸ್ ವಿಭಾಗದ, ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ, ಪ್ರತಿಷ್ಠಿತ ಜೈವಿಕ ತಂತ್ರಜ್ಞಾನ ಸಂಶೋಧನಾ ಪ್ರಾಧ್ಯಾಪಕರಾದ ಡಾ. ಟಿ.ಪಿ ಸಿಂಗ್ ಅವರು ಘಟಿಕೋತ್ಸವದಲ್ಲಿ ಭಾಷಣವನ್ನು ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವರು, ಕರ್ನಾಟಕ ಸರ್ಕಾರ ಹಾಗೂ ಸಹ ಕುಲಾಧಿಪತಿಗಳಾದ ಡಾ.ಎಂ.ಸಿ ಸುಧಾಕರ್ ಅವರು ಘಟಿಕೋತ್ಸವದಲ್ಲಿ ಉಪಸ್ಥಿತರಿರುತ್ತಾರೆ.