ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರಿಂದ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕಾರ
ನವದೆಹಲಿ: ಭಾರತದ ನಿಯೋಜಿತ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಪ್ರಮಾಣ ವಚನ ಸಮಾರಂಭ ಸೋಮವಾರ ಅಂದರೆ ಇಂದು ಇಲ್ಲಿ ನಡೆಯಲಿದೆ. ನವೆಂಬರ್ 11 ರಂದು ಬೆಳಗ್ಗೆ 10 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಖನ್ನಾ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಸೋಮವಾರದಂದು ಅಧಿಕಾರ ವಹಿಸಿಕೊಳ್ಳಲಿರುವ ನ್ಯಾಯಮೂರ್ತಿ ಖನ್ನಾ ಅವರು ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ. ನ್ಯಾಯಮೂರ್ತಿ ಖನ್ನಾ ಅವರ ಅಧಿಕಾರಾವಧಿಯು ಮೇ 13, 2025 ರವರೆಗೆ…