ಹಿರಿಯ ರಾಜಕೀಯ ಮುತ್ಸದ್ಧಿ ಎಸ್ ಎಂ ಕೃಷ್ಣ ಇನ್ನಿಲ್ಲ

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ (1999-2004) ಮತ್ತು ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿಯನ್ನಾಗಿ ಮಾಡಿದ ಕೀರ್ತಿಗೆ ಪಾತ್ರರಾಗಿದ್ದ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರು 92 ನೇ ವಯಸ್ಸಿನಲ್ಲಿ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಕಳೆದ ಕೆಲವು ತಿಂಗಳುಗಳಲ್ಲಿ ವಿವಿಧ ಕಾಯಿಲೆಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತ ಇದ್ದ ಅವರು ಮಂಗಳವಾರ ಮುಂಜಾನೆ 2.30-2.45 ರ ಸುಮಾರಿಗೆ ನಿಧನರಾಗಿದ್ದಾರೆ. ಕಳೆದ ವರ್ಷ, ಕೃಷ್ಣ ಅವರ ರಾಜಕೀಯ ವೃತ್ತಿಜೀವನವನ್ನು ಗುರುತಿಸಿ ಭಾರತದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣ ಪ್ರಶಸ್ತಿಯನ್ನು ಪುರಸ್ಕರಿಸಲಾಗಿತ್ತು.

Read More